ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಸ್ವ ಉದ್ಯೋಗ ಕಾರ್ಯಕ್ರಮದಡಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ
ಯೋಜನೆ ವಿವರ
ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ /ಯುವತಿಯರು ಸಣ್ಣ ಕೈಗಾರಿಕೆ, ಸೇವಾ ಕ್ಷೇತ್ರ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ನಿಗಮದ ಸಹಾಯಧನ ಮತ್ತು ಬ್ಯಾಂಕಿನ ಸಾಲ ವ್ಯವಸ್ಥೆಯೊಂದಿಗೆ ಯೋಜನೆಯನ್ನು ಅನುಷ್ಟಾನ ಮಾಡಲಾಗುವುದು.
ಐರಾವತ ಯೋಜನೆ:
ಯೋಜನೆ ವಿವರ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಪರಿಶಿಷ್ಟ ಪಂಗಡದ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿಗಳ ಮಾಲೀಕರನ್ನಾಗಿ ಮಾಡಿ “ಓಲಾ”/”ಉಬರ್” ಮತ್ತಿತರೆ ಸಂಸ್ಥೆಗಳ ಸಹಯೋಗದಲ್ಲಿ ಅತಿ ಹೆಚ್ಚು ಆದಾಯ ಪಡೆಯುವ “ಐರಾವತ ಯೋಜನೆ” ಅನುಷ್ಟಾನಗೊಳಿಸಲು ಉದ್ದೇಶಿಸಿದೆ.
ಸಮೃದ್ದಿ ಯೋಜನೆ
ಯೋಜನೆ ವಿವರ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಗ್ರಾಮೀಣ/ ನಗರ ಪ್ರದೇಶಗಳಲ್ಲಿನ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮಶೀಲರನ್ನಾಗಿಸಲು “ಸಮೃದ್ಧಿ ಯೋಜನೆ” ಅನುಷ್ಟಾನಗೊಳಿಸಲು ಉದ್ದೇಶಿಸಿದೆ. ಸದರಿ ಯೋಜನೆಯಡಿ ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು.
ಕಾಫಿ ಬೆಳೆಯ ಸಮಗ್ರ ಅಭಿವೃದ್ಧಿ ಯೋಜನೆ
ಯೋಜನೆ ವಿವರ
ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ, ಕೊಡಗು ಜಿಲ್ಲೆಯ, ವಿರಾಜಪೇಟೆ ತಾಲ್ಲೂಕು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆತಾಲ್ಲೂಕಿನಲ್ಲಿ ಆದಿವಾಸಿ ಸಮುದಾಯದವರು ಬೆಳೆಯುತ್ತಿರುವ ಕಾಫಿ ಮತ್ತು ಕರಿಮೆಣಸು ಬೆಳೆಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಕಾಫಿ ಮಂಡಳಿಯ ಸಹಯೋಗದೊಂದಿಗೆ ಯೋಜನೆಯನ್ನು ರೂಪಿಸಿ ಅನುಷ್ಟಾನಗೊಳಿಸಲಾಗುತ್ತಿದೆ.